ADVERTISEMENT

ಜನಸಂಖ್ಯೆ ನಿಯಂತ್ರಣಕ್ಕೆ ಸಚಿವ ಈಶ್ವರಪ್ಪ ಒಲವು

​ಪ್ರಜಾವಾಣಿ ವಾರ್ತೆ
Published 12 ಜುಲೈ 2021, 19:30 IST
Last Updated 12 ಜುಲೈ 2021, 19:30 IST
 ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ   

ಶಿವಮೊಗ್ಗ: ಜನಸಂಖ್ಯೆ ನಿಯಂತ್ರಿಸಲು ಉತ್ತರ ಪ್ರದೇಶ ಸರ್ಕಾರ ಕೈಗೊಂಡ ನಿರ್ಣಯ ಸಕಾಲಿಕ. ಕರ್ನಾಟಕ ಸೇರಿ ದೇಶದಲ್ಲಿ ಇಂತಹ ಕಾನೂನು ಜಾರಿಯ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

ದೇಶದ ಜನಸಂಖ್ಯೆ ಪ್ರತಿದಿನವೂ ಹೆಚ್ಚಳವಾಗುತ್ತಿದೆ. ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಸಾಕಷ್ಟು ಕ್ರಮ ಕೈಗೊಂಡಿದೆ. ರಾಜ್ಯಗಳು ಇಂತಹ ವಿಷಯದಲ್ಲಿ ಕೈಜೋಡಿಸಬೇಕಿದೆ. ಕರ್ನಾಟಕದಲ್ಲೂ ಇಂತಹ ಕಾಯ್ದೆ ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿ ನೇತೃತ್ವದಲ್ಲಿ ಸಮಾಲೋಚನೆ ನಡೆಸಿ, ನಿರ್ಧಾರ ತೆಗೆದುಕೊಳ್ಳಲಾಗುವುದು. ಉತ್ತರ ಪ್ರದೇಶ ಸರ್ಕಾರ ಜಾರಿಗೆ ತಂದಿರುವ ಕರಡು ಮಸೂದೆಯ ಸಾಧಕ–ಬಾಧಕ ನೋಡಿಕೊಂಡು ಮುಂದಿನ ಹೆಜ್ಜೆ ಇಡಲಾಗುವುದುಎಂದು ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.