ADVERTISEMENT

ಸಚಿವ ಕೆ.ಎಸ್. ಈಶ್ವರಪ್ಪಗೆ ಕೋವಿಡ್‌ ಪಾಸಿಟಿವ್‌

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 13:53 IST
Last Updated 1 ಸೆಪ್ಟೆಂಬರ್ 2020, 13:53 IST
ಕೆ.ಎಸ್. ಈಶ್ವರಪ್ಪ
ಕೆ.ಎಸ್. ಈಶ್ವರಪ್ಪ   

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸೋಮವಾರ ರಾತ್ರಿ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಿದ್ದರು. ಶೀತ ಕಾಣಿಸಿಕೊಂಡ ಕಾರಣ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಿದ್ದರು. ವರದಿ ಪಾಸಿಟಿವ್ ಬಂದ ತಕ್ಷಣ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ನನಗೆ ಇಂದು ಕೊರೊನಾ ಸೋಂಕು ದೃಡಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ’ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಭಾನುವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.