ADVERTISEMENT

ಕೆಎಸ್‌ಸಿಎ ಚುನಾವಣೆ: ಮೇಲ್ಮನವಿ ವಜಾ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 18:33 IST
Last Updated 4 ಡಿಸೆಂಬರ್ 2025, 18:33 IST
<div class="paragraphs"><p>ಕೆಎಸ್‌ಸಿಎ ಲಾಂಛನ</p></div>

ಕೆಎಸ್‌ಸಿಎ ಲಾಂಛನ

   

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಕೆ.ಎನ್.ಶಾಂತಕುಮಾರ್ ಅವರನ್ನು ಚುನಾವಣೆಯಲ್ಲಿ ಅರ್ಹ ಅಭ್ಯರ್ಥಿ ಎಂದು ಘೋಷಿಸುವಂತೆ ಆದೇಶಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ರದ್ದುಗೊಳಿಸಬೇಕೆಂಬ ಮೇಲ್ಮನವಿಯನ್ನು ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ.

ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಟೀಮ್ ಗೇಮ್ ಚೇಂಜರ್ಸ್ ಬಣದ  ಕಲ್ಪನಾ ವೆಂಕಟಾಚಾರ್ ಸಲ್ಲಿಸಿದ್ದ ರಿಟ್‌ ಮೇಲ್ಮನವಿಯನ್ನು, ಗುರುವಾರ ವಿಚಾರಣೆ ನಡೆಸಿದ, ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿತು.

ADVERTISEMENT

ಈ ಆದೇಶದಿಂದಾಗಿ ಕೆಎಸ್‌ಸಿಎ ಚುನಾವಣೆ ನಿಗದಿತ ದಿನಾಂಕದಂತೆ ಇದೇ 7 ರಂದು ನಡೆಯಲಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.