ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025 (ಕೆಸೆಟ್-2025) ನ.2ರಂದು ನಡೆಯಲಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆ.28ರಿಂದ ಆರಂಭಗೊಳ್ಳಲಿದೆ.
ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಪಾವತಿಗೆ ಸೆ.19ರವರೆಗೆ ಅವಕಾಶವಿರುತ್ತದೆ. ಅ.24ರಂದು ಪ್ರವೇಶ ಪತ್ರ (ಹಾಲ್ ಟಿಕೆಟ್) ಬಿಡುಗಡೆಯಾಗಲಿದೆ. ಮಾಹಿತಿಗೆ ಕೆಇಎ ವೆಬ್‌ಸೈಟ್ https://cetonline.karnataka.gov.in/kea/ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು 33 ವಿಷಯಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.