ADVERTISEMENT

ಇದೇ 25ರಂದು ಕೆ–ಸೆಟ್‌ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 21:20 IST
Last Updated 15 ಏಪ್ರಿಲ್ 2021, 21:20 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮೈಸೂರು: ಮೈಸೂರು ವಿಶ್ವವಿದ್ಯಾಲಯವು ಮುಂದೂಡಿದ್ದ, ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯು (ಕೆ–ಸೆಟ್‌) ಏ. 25ರಂದು ನಡೆಯಲಿದೆ.

‘ಪರೀಕ್ಷೆ ನಡೆಸುವ ವಿಚಾರವನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿದೆ. ಕೋವಿಡ್‌–19 ಮಾರ್ಗಸೂಚಿ ಪ್ರಕಾರವೇ ಪರೀಕ್ಷೆ ನಡೆಸಲಾಗುವುದು’ ಎಂದು ಕೆ–ಸೆಟ್‌ ಸಂಯೋಜಕಪ್ರೊ.ಎಚ್‌.ರಾಜಶೇಖರ್‌ ತಿಳಿಸಿದರು.

ಬೆಂಗಳೂರು, ಮೈಸೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಶಿವಮೊಗ್ಗ ಮತ್ತು ತುಮಕೂರಿನಲ್ಲಿರುವ ನೋಡಲ್‌ ಕೇಂದ್ರಗಳಲ್ಲಿ 41 ವಿಷಯಗಳಲ್ಲಿ ಪರೀಕ್ಷೆ ನಡೆಯಲಿದೆ. ಮಾಹಿತಿಗೆ http://kset.uni-mysore.ac.in

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.