ADVERTISEMENT

ಕೆ-ಸೆಟ್ ಪರೀಕ್ಷೆ ಜುಲೈ 25ಕ್ಕೆ ನಿಗದಿ

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 6:17 IST
Last Updated 9 ಜುಲೈ 2021, 6:17 IST
ಪರೀಕ್ಷೆ–ಪ್ರಾತಿನಿಧಿಕ ಚಿತ್ರ
ಪರೀಕ್ಷೆ–ಪ್ರಾತಿನಿಧಿಕ ಚಿತ್ರ   

ಮೈಸೂರು: ಕೋವಿಡ್‌ ಕಾರಣದಿಂದ ಮುಂದೂಡಲಾಗಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್‌) ದಿನಾಂಕವನ್ನು ಮರುನಿಗದಿ ಮಾಡಲಾಗಿದ್ದು, ಜುಲೈ 25ರಂದು ಪರೀಕ್ಷೆ ನಡೆಯಲಿದೆ.

ಈ ಮೊದಲು ಏಪ್ರಿಲ್ 11ರಂದು ಕೆ-ಸೆಟ್ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಲಾಕ್‌ಡೌನ್‌ ಕಾರಣದಿಂದಾಗಿ ಪರೀಕ್ಷೆಯನ್ನು ಮುಂದೂಡಿ ವಿಶ್ವವಿದ್ಯಾಲಯವು ಆದೇಶ ಹೊರಡಿಸಿತ್ತು. ಈಗ ಮತ್ತೆ ದಿನಾಂಕವನ್ನು ನಿಗದಿ ಮಾಡಿ ಮೈಸೂರು ವಿ.ವಿ. ಪ್ರಕಟಣೆ ಹೊರಡಿಸಿದೆ.

ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯದ ವೆಬ್​ಸೈಟನ್ನು ಸಂಪರ್ಕಿಸಬಹುದು http://kset.uni-mysore.ac.in

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.