
ಪ್ರಜಾವಾಣಿ ವಾರ್ತೆ
ಮೈಸೂರು: ಭಾನುವಾರ (ಏಪ್ರಿಲ್ 11) ನಿಗದಿಯಾಗಿದ್ದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು (ಕೆ–ಸೆಟ್) ಮುಂದೂಡಲಾಗಿದೆ.
’ಪರೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ಮಾಡಲಾಗಿತ್ತು. ಆದರೆ ಕಾರಣಾಂತರದಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಕೆ–ಸೆಟ್ ವೆಬ್‌ಸೈಟ್‌ನಲ್ಲಿ (http://kset.uni-mysore.ac.in) ಪ್ರಕಟಿಸಲಾಗುವುದು’ ಎಂದು ಮೈಸೂರು ವಿಶ್ವವಿದ್ಯಾಲಯದ ಕೆ–ಸೆಟ್ ಸಂಯೋಜನಾಧಿಕಾರಿ ಪ್ರೊ.ಎಚ್.ರಾಜಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರಿಗೆ ನೌಕರರ ಮುಷ್ಕರದ ಕಾರಣ ಕೆ–ಸೆಟ್ ಪರೀಕ್ಷೆ ಮುಂದೂಡುವಂತೆ ಕೆಲವು ಅಭ್ಯರ್ಥಿಗಳು ಮನವಿ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.