ಸಾಂದರ್ಭಿಕ ಚಿತ್ರ
ಬೆಂಗಳೂರು: ಕೆ-ಸೆಟ್-24 ಪರೀಕ್ಷೆಗೆ ಸಂಬಂಧಿಸಿದಂತೆ 41 ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ರಾತ್ರಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಫಲಿತಾಂಶ ಕುರಿತು ಆಕ್ಷೇಪಣೆಗಳು ಇದ್ದಲ್ಲಿ ಡಿ.19ರ ಮಧ್ಯಾಹ್ನ 12.30ರೊಳಗೆ ಪೂರಕ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಸಲ್ಲಿಸಲು ಕೋರಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.