ADVERTISEMENT

ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಧಾಕರ್‌ ನೇಮಕ

​ಪ್ರಜಾವಾಣಿ ವಾರ್ತೆ
Published 20 ಜೂನ್ 2019, 19:01 IST
Last Updated 20 ಜೂನ್ 2019, 19:01 IST
ಕೆ.ಸುಧಾಕರ್‌
ಕೆ.ಸುಧಾಕರ್‌   

ಬೆಂಗಳೂರು: ಕಾಂಗ್ರೆಸ್‌ನ ಅತೃಪ್ತ ಶಾಸಕರ ಗುಂಪಿನಲ್ಲಿ ಮುಂಚೂಣಿಯಲ್ಲಿದ್ದಚಿಕ್ಕಬಳ್ಳಾಪುರ ಶಾಸಕ ಕೆ. ಸುಧಾಕರ್‌ ಅವರನ್ನುಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ವಿವಿಧ ಮಂಡಳಿಗೆ ನೇಮಕ: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಹೊರ ಬಂದಿದ್ದ ಸಿ.ಜಯರಾಮ್ ಅವರನ್ನು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಬೆಂಗಳೂರು ಅಂತರಾಷ್ಟ್ರೀಯ ವಿಮಾನನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರ ಅಧಿಕಾರ ಅವಧಿ ರದ್ದುಪಡಿಸಿದ್ದು, ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ ಅವರನ್ನುಬೆಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣ ಯೋಜನಾ ಪ್ರಾಧಿಕಾರ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.