ADVERTISEMENT

ಮಹಾರಾಷ್ಟ್ರಕ್ಕೆ ಬಸ್‌ ಸಂಚಾರ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 20:20 IST
Last Updated 18 ಸೆಪ್ಟೆಂಬರ್ 2020, 20:20 IST

ಬೆಂಗಳೂರು: ಮಹಾರಾಷ್ಟ್ರಕ್ಕೆ ಲಾಕ್‌ಡೌನ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರವನ್ನು ಇದೇ 22ರಿಂದ ಪುನರ್ ಆರಂಭಿಸಲು ನಿಗಮ ನಿರ್ಧರಿಸಿದೆ.

ಬೆಂಗಳೂರು, ದಾವಣಗೆರೆ, ಮಂಗಳೂರು ಸೇರಿ ರಾಜ್ಯದ ವಿವಿಧೆಡೆಯಿಂದ ಪ್ರಯಾಣಿಕರ ಅಗತ್ಯಕ್ಕೆ ಅನುಗುಣವಾಗಿ ಬಸ್‌ಗಳು ಕಾರ್ಯಾಚರಣೆಗೊಳ್ಳಲಿವೆ ಎಂದು ನಿಗಮ ತಿಳಿಸಿದೆ.

‘ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯ. ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌ (www.ksrtc.in)ಮೂಲಕ ಆನ್‌ಲೈನ್‌ನಲ್ಲಿ ಟಿಕೆಟ್ ಕಾಯ್ದಿರಿಸಬಹುದು. ನಿಗಮದ ಮತ್ತು ಫ್ರಾಂಚೈಸಿ ಕೌಂಟರ್‌ಗಳಲ್ಲೂ ಆಸನಗಳನ್ನು ಕಾಯ್ದಿರಿಸಬಹುದು’ ಎಂದು ವಿವರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.