ಬೆಂಗಳೂರು: ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಇಟಿಎಚ್‌ಆರ್ ವಿಶ್ವ ಉದ್ಯೋಗಿ ಅನುಭವಿ ಪ್ರಶಸ್ತಿ ಲಭಿಸಿದೆ. ಅತ್ಯುತ್ತಮ ನೌಕರ ಅನುಭವ – ಸಾರ್ವಜನಿಕ ವಲಯ ಸಂಸ್ಥೆಗಳು (ಪಿಎಸ್‌ಯುಎಸ್) ವರ್ಗದಲ್ಲಿ ಈ ಪುರಸ್ಕಾರ ದೊರಕಿದೆ. ಶನಿವಾರ ನಗರದ ಶೆರಟನ್ ಗ್ರ್ಯಾಂಡ್ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ಕೆಎಸ್‌ಆರ್‌ಟಿಸಿ ಪರವಾಗಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕ ಅಶ್ರಫ್ ಕೆ.ಎಂ. ಪ್ರಶಸ್ತಿ ಸ್ವೀಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.