ADVERTISEMENT

ಸಾರಿಗೆ ನೌಕರರ ಸತ್ಯಾಗ್ರಹ: ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಚಿವ ಲಕ್ಷ್ಮಣ ಸವದಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2020, 7:49 IST
Last Updated 20 ಫೆಬ್ರುವರಿ 2020, 7:49 IST
ಸತ್ಯಾಗ್ರಹ ನಡೆಸುತ್ತಿರುವ ಸಿಬ್ಬಂದಿ
ಸತ್ಯಾಗ್ರಹ ನಡೆಸುತ್ತಿರುವ ಸಿಬ್ಬಂದಿ   

ಬೆಂಗಳೂರು:ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯವ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು ಸ್ಥಳಕ್ಕೆ ಸಾರಿಗೆ ಸಚಿವಲಕ್ಷ್ಮಣ ಸವದಿ ಭೇಟಿ ನೀಡಿ ಬೇಡಿಕೆ ಈಡೇರಿಸುವ ಭರವಸೆ ನೀಡಿದರು.

ಲಕ್ಷ್ಮಣ ಸವದಿ ಮಾತನಾಡಿ ಇಲಾಖೆಯಲ್ಲಿ ನಾನು ಇರಬಹುದು ಹೋಗಬಹುದು. ನೀವು ಯಾವಾಗಲೂ ಇರ್ತಿರಿ. ಬಸ್ ಸಂಚಾರಕ್ಕೆ ತೊಂದರೆ ಆಗದಂತೆ ಪ್ರತಿಭಟನೆ ನಡೆಸಿರುವುದು ಸಂತೋಷದ ವಿಷಯ. ನಿಮ್ಮ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರುತ್ತೆನೆ ಎಂದುಸವದಿ ಭರವಸೆ ನೀಡಿದರು.

ಬೆಳಗ್ಗೆ 9 ಗಂಟೆಗೆಸ್ವಾತಂತ್ರ್ಯ ಉದ್ಯಾನಕ್ಕೆ ಆಗಮಿಸಿದಸಾರಿಗೆ ಸಂಸ್ಥೆಗಳ ಸಿಬ್ಬಂದಿ ಸತ್ಯಾಗ್ರಹ ಆರಂಭಿಸಿದ್ದಾರೆ. ಇದಕ್ಕೂ ಮುನ್ನ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಕಾಲ್ನಡಿಗೆ ಜಾಥ ನಡೆಸಿದರು. ಈ ವೇಳೆ ಬೇಡಿಕೆ ಈಡೇರಿಕೆಗಾಗಿ ಸರ್ಕಾರವನ್ನು ಆಗ್ರಹಿಸಿದರು.

ADVERTISEMENT

ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳು ಮಾತ್ರವಲ್ಲದೇ ಅವರ ಕುಟುಂಬ ಸದಸ್ಯರು ಭಾಗವಹಿಸಿದ್ದಾರೆ. ಸಿಬ್ಬಂದಿಗಳ ಸತ್ಯಾಗ್ರಹದಿಂದಬಸ್‌ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಸಂಜೆ 3.30ರ ವರೆಗೂ ಸತ್ಯಾಗ್ರಹ ನಡೆಯಲಿದೆ. ಸತ್ಯಾಗ್ರಹದಲ್ಲಿ ಸಾವಿರಾರು ಜನರು ಭಾಗವಹಿಸಿದ್ದು ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.