ADVERTISEMENT

ಈಡೇರದ ಬೇಡಿಕೆ: ಸಾರಿಗೆ ನೌಕರರ ಬೆಂಗಳೂರು ಚಲೋ 29ಕ್ಕೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 17:37 IST
Last Updated 17 ಜನವರಿ 2026, 17:37 IST
<div class="paragraphs"><p>ಸಾರಿಗೆ ನಿಗಮಗಳ ನೌಕರರ ಮುಷ್ಕರ</p></div>

ಸಾರಿಗೆ ನಿಗಮಗಳ ನೌಕರರ ಮುಷ್ಕರ

   

ಬೆಂಗಳೂರು: ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರ ಬೇಡಿಕೆ ಈಡೇರಿಸದೇ ಇರುವುದನ್ನು ಖಂಡಿಸಿ ಜ.29ರಂದು ಬೆಂಗಳೂರು ಚಲೋ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.

38 ತಿಂಗಳ ಹಿಂಬಾಕಿ ನೀಡಿಲ್ಲ. 2024ರ ಜನವರಿಯಿಂದ ವೇತನ ಪರಿಷ್ಕರಣೆ ನಡೆಸಬೇಕಿತ್ತು. ಹಲವು ಬಾರಿ ಸರ್ಕಾರದೊಂದಿಗೆ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನವಾಗದೇ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಕ್ರಿಯಾ ಸಮಿತಿಯ ಎಚ್‌.ವಿ. ಅನಂತಸುಬ್ಬರಾವ್‌, ಬಿ. ಜಯದೇವ ಅರಸು, ಎಚ್‌.ಡಿ. ರೇವಪ್ಪ, ವಿ. ಸೋಮಣ್ಣ, ಜಗದೀಶ ಎಚ್‌.ಆರ್‌., ರಾಜೇಂದ್ರಗೌಡ ಜಿ.ಕೆ. ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.