ADVERTISEMENT

ಹಠ ಸರಿಯಲ್ಲ, ಅರ್ಥ ಮಾಡಿಕೊಂಡು ಕೆಲಸಕ್ಕೆ ಬನ್ನಿ: ಸಾರಿಗೆ ನೌಕರರಿಗೆ ಸಿಎಂ ಮನವಿ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 6:24 IST
Last Updated 9 ಏಪ್ರಿಲ್ 2021, 6:24 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: 'ಇಂದಿನ ಪರಿಸ್ಥಿತಿಯಲ್ಲಿ ಸಾರಿಗೆ ನೌಕರರಿಗೆ 6ನೇ ವೇತನ‌ ಆಯೋಗದ ಶಿಫಾರಸು ಜಾರಿ ಸಾಧ್ಯವೇ ಇಲ್ಲ. ಸಾಧ್ಯವೇ ಇಲ್ಲ ಎಂದು ಹೇಳಿದ ಮೇಲೂ ಹಠ ಮಾಡುವುದು ಸರಿಯಲ್ಲ. ಈಗಲಾದರೂ ಅರ್ಥ ಮಾಡಿಕೊಂಡು ಕೆಲಸಕ್ಕೆ ಬನ್ನಿ' ಎಂದು ಮುಷ್ಕರನಿರತ ಸಾರಿಗೆ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದರು‌.

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಬೆಳಿಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಸಾರ್ವಜನಿಕರಿಗೆ ತೊಂದರೆ ಆಗದಂತೆ ನಡೆದುಕೊಳ್ಳಿ' ಎಂದರು.

'ಇವತ್ತಿನಿಂದ ನಿಮ್ಮ ಬಸ್‌ಗಳನ್ನು ಓಡಾಡಿಸೋಕೆ ಶುರು ಮಾಡಿ.ಕೋವಿಡ್ ಕಾರಣದಿಂದ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿರುವಾಗ ಈ ರೀತಿ ಹಠ ಮಾಡುವುದು ಎಷ್ಟರ ಮಟ್ಟಿಗೆ ಸರಿ. ನೀವೇ ಯೋಚನೆ ಮಾಡಿ. ಮತ್ತೊಮ್ಮೆ ಮನವಿ ಮಾಡ್ತೇನೆ. ಹಠ ಬಿಟ್ಟುಬನ್ನಿ' ಎಂದರು.

ADVERTISEMENT

'ಆದಾಯದಲ್ಲಿ ಶೇ 85ರಷ್ಟು ಭಾಗ ಸರ್ಕಾರಿ ನೌಕರಿಗೆ ವೇತನ, ಪಿಂಚಣಿ ಸೇರಿದಂತೆ ಇತರ ಯೋಜನೇತರ ವೆಚ್ಚಗಳಿಗೆ ಖರ್ಚಾಗುತ್ತಿದೆ. ಸಾರಿಗೆ ನೌಕರರು ಯಾವುದೇ ಕಾರಣಕ್ಕೂ ಹಠಕ್ಕೆ ಬೀಳಬಾರದು. ಈಗಾಗಲೇ 9:ಬೇಡಿಕೆಗಳಲ್ಲಿ‌ 8 ಬೇಡಿಕೆ ಈಡೇರಿಸಿದ್ದೇವೆ. ಅದರಲ್ಲಿ ಲೋಪದೋಷ ಇದ್ದರೆ ಹೇಳಿ, ಸರಿಪಡಿಸೋಣ. ಅದನ್ನು ಬಿಟ್ಟು ಯಾರದ್ದೋ ಮಾತಿಗೆ ಬಲಿಯಾಗಿ ಈ ರೀತಿ ಹಠ ಮಾಡುವುದು ಸರಿಯಲ್ಲ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.