ADVERTISEMENT

ಸಾರಿಗೆ ನೌಕರರ ಸಂಘಟನೆಗಳ ಪ್ರತಿನಿಧಿಗಳ ಜೊತೆ ಭಾನುವಾರ ಸಭೆ: ಲಕ್ಷ್ಮಣ ಸವದಿ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 15:13 IST
Last Updated 12 ಡಿಸೆಂಬರ್ 2020, 15:13 IST
ಸಾರಿಗೆ ಸಚಿವ ಲಕ್ಷ್ಮಣ ಸವದಿ
ಸಾರಿಗೆ ಸಚಿವ ಲಕ್ಷ್ಮಣ ಸವದಿ    

ಬೆಂಗಳೂರು: ‘ಸಾರಿಗೆ ನೌಕರರ ಸಂಘಟನೆಗಳ ಪ್ರತಿನಿಧಿಗಳ ಜೊತೆ ಭಾನುವಾರ ಬೆಳಿಗ್ಗೆ 10 ಗಂಟೆಗೆ ಸಭೆ ನಡೆಸಲಾಗುವುದು’ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವಲಕ್ಷ್ಮಣ ಸವದಿ ಹೇಳಿದರು.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಶನಿವಾರ ರಾತ್ರಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾಲ್ಕು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ. ಸಭೆಗೆ ಬರಲು ಅವರು ಒಪ್ಪಿದ್ದಾರೆ’ ಎಂದರು.

‘ವಿಕಾಸಸೌಧದಲ್ಲಿರುವ ನನ್ನ ಕಚೇರಿಯಲ್ಲಿ ಸಭೆ ನಡೆಯಲಿದೆ. ಸಭೆಯ ತೀರ್ಮಾನಗಳನ್ನು ಮುಖ್ಯಮಂತ್ರಿಗೆ ತಿಳಿಸಲಾಗುವುದು. ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿ ಪ‍್ರಕಟಿಸಲಿದ್ದಾರೆ. ಆರ್ಥಿಕ ಇತಿಮತಿ ನೋಡಿಕೊಂಡು ನೌಕರರ ಬೇಡಿಕೆಗಳನ್ನು ಪರಿಹರಿಸುವ ಬಗ್ಗೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಲಾಗುವುದು’ ಎಂದೂ ಸವದಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.