ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಗಿಡ್ಡೋಬನಹಳ್ಳಿ ಸಮೀಪ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿವೋಲ್ವೋ ಬಸ್ ಮಂಗಳವಾರ ಬೆಳಿಗ್ಗೆ ಬೆಂಕಿಗೆ ಅಹುತಿಯಾಗಿದೆ.
ಬೆಳಗಾವಿಯಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಅವಘಡಕ್ಕೆ ಸಿಲುಕಿದೆ. ಬಸ್ನಲ್ಲಿ ಇದ್ದ 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದಾರೆ. ಕ್ಷಣಾರ್ಧದಲ್ಲಿ ಪ್ರಯಾಣಿಕರು ಕೆಳಗೆ ಇಳಿದಿದ್ದಾರೆ. ಇದರಿಂದ ಸಂಭವನೀಯ ಭಾರಿ ದುರಂತ ತಪ್ಪಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.