ADVERTISEMENT

ಕೆಎಸ್‌ಆರ್‌ಟಿಸಿ ಪ್ರಯಾಣ ವಾರಾಂತ್ಯವೂ ದುಬಾರಿ ಅಲ್ಲ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 8:20 IST
Last Updated 19 ಅಕ್ಟೋಬರ್ 2020, 8:20 IST
ಕೆಎಸ್‌ಆರ್‌ಟಿಸಿ
ಕೆಎಸ್‌ಆರ್‌ಟಿಸಿ   

ಬೆಂಗಳೂರು: ಐಷಾರಾಮಿ ಬಸ್‌ಗಳ ಪ್ರಯಾಣ ದರವನ್ನುವಾರಾಂತ್ಯದ ದಿನಗಳಲ್ಲಿ ಶೇ 10ರಷ್ಟು ಹೆಚ್ಚಳ ಮಾಡುತ್ತಿದ್ದ ಕ್ರಮವನ್ನು ಕೆಎಸ್‌ಆರ್‌ಟಿಸಿ ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದಿದೆ.

ಕೋವಿಡ್ ಕಾರಣ ಪ್ರಯಾಣಿಕ ಸಂಖ್ಯೆ ಕಡಿಮೆ ಕಡಿಮೆಯಾಗಿದೆ. ಅಲ್ಲದೇ ಖಾಸಗಿ ಬಸ್‌ಗಳಲ್ಲಿ ಪ್ರಯಾಣ ದರ ಕಡಿಮೆ ಇರುವ ಕಾರಣ ಸಾರಿಗೆ ಸಂಸ್ಥೆ ಬಸ್‌ಗಳಿಗೆ ಪ್ರಯಾಣಿಕರು ಕಡಿಮೆಯಾಗುತ್ತಿದ್ದಾರೆ. ಪ್ರಯಾಣಿಕರನ್ನು ಸೆಳೆಯುವ ನಿಟ್ಟಿನಲ್ಲಿ ವಾರಾಂತ್ಯದಲ್ಲಿ ಪ್ರಯಾಣದರ ಹೆಚ್ಚಿಸದೆ ವಾರದ ಎಲ್ಲಾ ದಿನವೂ ಒಂದೇ ರೀತಿಯ ದರ ಅನ್ವಯ ಮಾಡಲಾಗಿದೆ. ಡಿಸೆಂಬರ್ 31ರವರೆಗೆ ಈ ಆದೇಶ ಚಾಲ್ತಿಯಲ್ಲಿ ಇರಲಿದೆ ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT