ADVERTISEMENT

ಅಂತರ ನಿಗಮ ವರ್ಗಾವಣೆಗೆ ಕೌನ್ಸೆಲಿಂಗ್

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 17:01 IST
Last Updated 3 ಸೆಪ್ಟೆಂಬರ್ 2021, 17:01 IST

ಬೆಂಗಳೂರು: ಅಂತರ ನಿಗಮ ವರ್ಗಾವಣೆಗೆ ಅರ್ಹರಾಗಿರುವ ನಾಲ್ಕು ಸಾರಿಗೆ ಸಂಸ್ಥೆಗಳ ನೌಕರರು ಕೌನ್ಸೆಲಿಂಗ್‌ಗೆ ಅರ್ಜಿ ಸಲ್ಲಿಸಲು ಸೆ.4ರಿಂದ 13ರವರೆಗೆ ಅವಕಾಶ ಕಲ್ಪಿಸಲಾಗಿದೆ.

ksrtc.org/counselling ವೆಬ್‌ಸೈಟ್‌ನಲ್ಲಿ ಸೆ.13ರ ಸಂಜೆ 5.30ರ ತನಕ ಅರ್ಜಿ ಸಲ್ಲಿಸಬಹುದು. ಕೌನ್ಸೆಲಿಂಗ್‌ನಲ್ಲಿ ಭಾಗವಹಿಸದಿದ್ದರೆ, ಲಭ್ಯವಿರುವ ಖಾಲಿ ಹುದ್ದೆಗಳಿಗೆ ನಿಯೋಜನೆ ಮಾಡಲಾಗುವುದು. ಲಿಖಿತ ಅರ್ಜಿ ಸ್ವೀಕರಿಸುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT