ಬೆಂಗಳೂರು: ಕೆಎಸ್‌ಆರ್‌ಟಿಸಿ ಸಹಿತ ಎಲ್ಲ ನಾಲ್ಕು ನಿಗಮಗಳಲ್ಲಿ ಟಿಕೆಟ್ ದರ ಏರಿಸುವ ಯಾವುದೇ ಪ್ರಸ್ತಾವ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಶ್ರೀನಿವಾಸ್ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಇನ್ನೂ ಪ್ರಸ್ತಾವ ಬಂದಿಲ್ಲ. ಟಿಕೆಟ್ ದರ ಏರಿಸುವ ಚಿಂತನೆ ನಡೆಸಿಲ್ಲ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.