ADVERTISEMENT

ಬಸ್‌ ಪ್ರಯಾಣಿಕರ ಸಂಖ್ಯೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 24 ಜೂನ್ 2021, 5:52 IST
Last Updated 24 ಜೂನ್ 2021, 5:52 IST

ಬೆಂಗಳೂರು: ಲಾಕ್‌ಡೌನ್ ಸಡಿಲಗೊಂಡ ಬಳಿಕ ಬಸ್‌ಗಳಲ್ಲಿ ಪ್ರಯಾಣಿಕರ ಸಂಚಾರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಎರಡನೇ ದಿನ ಕೆಎಸ್‌ಆರ್‌ಟಿಸಿಗೆ ₹1.27 ಕೋಟಿ ವರಮಾನ ಸಂಗ್ರಹವಾಗಿದೆ.

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸೋಮವಾರ (ಜೂ.21) 1.10 ಲಕ್ಷ ಜನ ಪ್ರಯಾಣಿಸಿದ್ದರು. ₹54.05 ಲಕ್ಷ ವರಮಾನ ಸಂಗ್ರಹವಾಗಿತ್ತು. ಮಂಗಳವಾರ 2.25 ಲಕ್ಷ ಪ್ರಯಾಣಿಕರು ಸಂಚರಿಸಿದ್ದು, ₹1.27 ಕೋಟಿ ವರಮಾನ ಸಂಗ್ರಹವಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಬುಧವಾರ 2,172 ಬಸ್‌ಗಳು ವಿವಿಧ ಡಿಪೋಗಳಿಂದ ಕಾರ್ಯಾಚರಣೆಯಾಗಿದ್ದು, ಆಂಧ್ರ ಪ್ರದೇಶ ಮತ್ತು ತೆಲಂಗಾಣಕ್ಕೂ 93 ಬಸ್‌ಗಳ ಸಂಚರಿಸಿವೆ ಎಂದು ವಿವರಿಸಿದೆ.

ADVERTISEMENT

ಬಿಎಂಟಿಸಿ ಬಸ್‌ಗಳಲ್ಲೂ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಸೋಮವಾರ 4.74 ಲಕ್ಷ ಪ್ರಯಾಣಿಕರು ಸಂಚರಿಸಿದ್ದು, ₹45 ಲಕ್ಷ ವರಮಾನ ಸಂಗ್ರಹವಾಗಿತ್ತು. ಮಂಗಳವಾರ 8 ಲಕ್ಷ ಜನರು ಪ್ರಯಾಣಿಸಿದ್ದು, ₹91 ಲಕ್ಷ ವರಮಾನ ಸಂಗ್ರಹವಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.