ADVERTISEMENT

Shakti Scheme | ಕೆಎಸ್‌ಆರ್‌ಟಿಸಿ ‘ಶಕ್ತಿ’ ವಿಶ್ವದಾಖಲೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2025, 0:41 IST
Last Updated 4 ಅಕ್ಟೋಬರ್ 2025, 0:41 IST
   

ಬೆಂಗಳೂರು: ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣ ಯೋಜನೆಯಾದ ‘ಶಕ್ತಿ’ ಯೋಜನೆಯಡಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ನಿಗಮಗಳ ಬಸ್‌ಗಳಲ್ಲಿ ಮಹಿಳೆಯರು 500 ಕೋಟಿ‌ ಬಾರಿ ಉಚಿತವಾಗಿ ಪ್ರಯಾಣ ಮಾಡಿರುವುದು ವಿಶ್ವದಾಖಲೆಗೆ ಸೇರ್ಪಡೆಯಾಗಿದೆ.

ಇತ್ತೀಚೆಗಷ್ಟೇ ಗೋಲ್ಡನ್ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್‌ಗೆ ಸೇರ್ಪಡೆಯಾಗಿದ್ದ ಉಚಿತ ಪ್ರಯಾಣವು ಈಗ ಇಂಟರ್‌ ನ್ಯಾಷನಲ್‌ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ವರ್ಲ್ಡ್‌ ರೆಕಾರ್ಡ್ ಆಫ್‌ ಎಕ್ಸೆಲೆನ್ಸ್‌ ಆಗಿ ದಾಖಲಾಗಿದೆ. ನಿಗಮಗಳ ಅಧಿಕಾರಿಗಳು, ನೌಕರರ ಪರಿಶ್ರಮ ಮತ್ತು ಪ್ರಯಾಣಿಕರ ಬೆಂಬಲದಿಂದ ಈ ಸಾಧನೆ ಆಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT