ಬೆಂಗಳೂರು: ರಾಜಧಾನಿಯಿಂದ ಬನಹಟ್ಟಿಗೆ ಹವಾನಿಯಂತ್ರಿತ ಸ್ಲೀಪರ್ ಬಸ್ ಸಂಚಾರ ಇದೇ 19ರಿಂದ ಆರಂಭವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ರಾತ್ರಿ 7.45ಕ್ಕೆ ಬೆಂಗಳೂರಿನಿಂದ ಹೊರಡುವ ಬಸ್, ಬಾಗಲಕೋಟೆ, ಜಮಖಂಡಿ ಮಾರ್ಗದಲ್ಲಿ ಬನಹಟ್ಟಿಗೆ ಬೆಳಿಗ್ಗೆ 7 ಗಂಟೆಗೆ ತಲುಪಲಿದೆ. ರಾತ್ರಿ 7.30ಕ್ಕೆ ಬನಹಟ್ಟಿಯಿಂದ ಹೊರಡುವ ಬಸ್, ಬೆಳಿಗ್ಗೆ 5 ಗಂಟೆಗೆ ಬೆಂಗಳೂರು ತಲುಪಲಿದೆ. ಪ್ರಯಾಣ ದರ ₹1,040 ನಿಗದಿ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.