ADVERTISEMENT

ಗೌರಿ–ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 1,500 ವಿಶೇಷ ಬಸ್‌

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 20:23 IST
Last Updated 22 ಆಗಸ್ಟ್ 2025, 20:23 IST
<div class="paragraphs"><p>ಕೆಎಸ್‌ಆರ್‌ಟಿಸಿ</p></div>

ಕೆಎಸ್‌ಆರ್‌ಟಿಸಿ

   

ಬೆಂಗಳೂರು: ಗೌರಿ, ಗಣೇಶ ಹಬ್ಬಗಳ ಪ್ರಯುಕ್ತ ಊರಿಗೆ, ಪ್ರವಾಸಕ್ಕೆ ಹೋಗುವವರ ಸಂಖ್ಯೆ ಹೆಚ್ಚಲಿರುವುದರಿಂದ ಕೆಎಸ್‌ಆರ್‌ಟಿಸಿ 1,500 ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಆಗಸ್ಟ್‌ 25 ಮತ್ತು 26ರಂದು ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಆಗಸ್ಟ್‌  27 ಮತ್ತು 31ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಇರಲಿದೆ.

ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ಬಸ್‌ಗಳು ಸಂಚರಿಸಲಿವೆ.

ADVERTISEMENT

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್,  ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಹಾಗೂ ಹೊರರಾಜ್ಯಗಳ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚ್ಚಿ, ಪಾಲಕ್ಕಾಡ್, ಎರ್ನಾಕುಲಂ, ತಿರುಪತಿ, ವಿಜಯವಾಡ ಸಹಿತ ವಿವಿಧೆಡೆ ವಿಶೇಷ ಬಸ್‌ಗಳು ಸಂಚರಿಸಲಿವೆ. ನಿಗಮದ ಕಾರ್ಯಾಚರಣೆ ವ್ಯಾಪ್ತಿಯ ಎಲ್ಲ ತಾಲ್ಲೂಕು, ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಬಸ್‌ಗಳು ಸಂಚರಿಸಲಿವೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 

www.ksrtc.karnataka.gov.in ವೆಬ್‌ಸೈಟ್ ಮೂಲಕ ಇ-ಟಿಕೆಟ್ ಬುಕಿಂಗ್‍ ಮಾಡಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಪ‍್ರಯಾಣದ ಟಿಕೆಟ್‌ ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ಸಾಗುವ ದರದಲ್ಲಿ ಶೇ 10 ರಿಯಾಯಿತಿ ದೊರೆಯಲಿದೆ ಎಂದು ಕೆೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.