ADVERTISEMENT

ಸರ್ಕಾರಿ ಸಾರಿಗೆ ನೌಕರರ ಮುಷ್ಕರ: ಬೆಂಗಳೂರಿನಲ್ಲಿ ರಸ್ತೆಗಿಳಿದ ಖಾಸಗಿ ಬಸ್‌

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 5:17 IST
Last Updated 7 ಏಪ್ರಿಲ್ 2021, 5:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಸಾರಿಗೆ ಮುಷ್ಕರಕ್ಕೆ ನೌಕರರು ಸಂಪೂರ್ಣ ಬೆಂಬಲ ನೀಡಿದ್ದು, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳು ರಸ್ತೆಗೆ ಇಳಿದಿಲ್ಲ. ಇದರಿಂದಾಗಿ ಪ್ರಯಾಣಿಕರು ಪರದಾಡುತ್ತಿದ್ದರೆ, ಪರ್ಯಾಯವಾಗಿ ಸರ್ಕಾರ ಖಾಸಗಿ ಬಸ್‌ಗಳಿಗೆ ಅವಕಾಶ ಕಲ್ಪಿಸಿದೆ.

ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣದೊಳಗೆ ಖಾಸಗಿ ಬಸ್‌ಗಳ ನಿಲುಗಡೆಗೆ ಅನುಮತಿ ನೀಡಲಾಗಿದ್ದು, ಪ್ರಯಾಣಿಕರನ್ನು ಕರೆದೊಯ್ಯುತ್ತಿವೆ. ಆದರೆ, ಮುಷ್ಕರದ ಮಾಹಿತಿ ಇರುವ ಕಾರಣ ಪ್ರಯಾಣಿಕರ ಸಂಖ್ಯೆಯೂ ಕಡಿಮೆಯಾಗಿದೆ. ಬಸ್‌ಗಳು ಯಾವ ಮಾರ್ಗದಲ್ಲಿ ಸಂಚರಿಸಬೇಕು, ದರ ಎಷ್ಟು ಪಡೆಯಬೇಕು ಎಂಬ ಪಟ್ಟಿಯನ್ನು ಸರ್ಕಾರವೇ ನಿಗದಿ ಮಾಡಿದೆ. ಆದರೆ, ಅದಕ್ಕೂ ಹೆಚ್ಚು ದರ ಪಡೆಯಲಾಗುತ್ತಿದೆ ಎಂಬ ಆರೋಪಗಳನ್ನೂ ಪ್ರಯಾಣಿಕರು ಮಾಡುತ್ತಿದ್ದರೆ.

ಸಾರಿಗೆ ನಿಗಮಗಳಿಗೆ ಡೀಸೆಲ್‌ ಸಬ್ಸಿಡಿ ಇರುವ ಕಾರಣ ಕಡಿಮೆ ದರ ಪಡೆಯಲಾಗುತ್ತದೆ. ಖಾಸಗಿ ಬಸ್‌ಗಳಿಗೆ ಈ ಅವಕಾಶ ಇಲ್ಲದ ಕಾರಣ ದುಬಾರಿ ದರದಲ್ಲೇ ಡೀಸೆಲ್ ಖರೀದಿ ಮಾಡಬೇಕು. ಹೀಗಾಗಿ, ಬಿಎಂಟಿಸಿ ನೀಡಿರುವ ದರದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವುದು ಕಷ್ಟ. ಸ್ವಲ್ಪ ಮಟ್ಟಿಗೆ ಹೆಚ್ಚಿನ ದರ ಪಡೆಯಬೇಕಾಗುತ್ತದೆ ಎಂದು ಖಾಸಗಿ ಬಸ್ ಮಾಲೀಕರು ಹೇಳುತ್ತಾರೆ.

ADVERTISEMENT

ಬಿಎಂಟಿಸಿ ಬಸ್‌ ಇಲ್ಲದ ಕಾರಣ ಮೆಟ್ರೊ ರೈಲುಗಳಲ್ಲೂ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆಟೋರಿಕ್ಷಾ, ಟ್ಯಾಕ್ಸಿಗಳಲ್ಲಿ ದಬಾರಿ ದರ ನೀಡಿ ಪ್ರಯಾಣಿಕರು ತೆರಳುತ್ತಿದ್ದಾರೆ.

ಇವುಗಳನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.