ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಆದೇಶ ಹೊರಡಿಸಿದ್ದು, ಇದರ ಬೆನ್ನಲ್ಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಕೂಡ ಪಾಸ್ ದರವನ್ನು ಕನಿಷ್ಠ ₹100ರಿಂದ 200ರಷ್ಟು ಏರಿಸಲು ಸಿದ್ಧತೆ ಮಾಡಿಕೊಂಡಿದೆ.
ಇದನ್ನೂ ಓದಿ:ಬಿಎಂಟಿಸಿವಿದ್ಯಾರ್ಥಿ ಪಾಸ್ ದರ ಏರಿಕೆ
ಕಳೆದ 8 ವರ್ಷಗಳಿಂದ ಪಾಸ್ ದರ ಏರಿಕೆ ಮಾಡಿಲ್ಲ. ಈ ವರ್ಷ ದರ ಏರಿಕೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ ಎಂದು ಕೆಎಸ್ಆರ್ಟಿಸಿ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
ಪ್ರೌಢಶಾಲೆ ವಿದ್ಯಾರ್ಥಿಗಳ ಪಾಸ್ ದರದಲ್ಲಿ ₹100, ಕಾಲೇಜು ವಿದ್ಯಾರ್ಥಿಗಳಿಗೆ ₹150 ಮತ್ತು ವೃತ್ತಿಪರ ಕೋರ್ಸ್ಗಳ ವಿದ್ಯಾರ್ಥಿಗಳ ಪಾಸ್ ದರದಲ್ಲಿ ₹200 ಏರಿಕೆಯಾಗಲಿದೆ.ಹೊಸ ದರದಂತೆ ಒಂದೆರಡು ದಿನಗಳಲ್ಲಿಪಾಸ್ ವಿತರಣೆ ಮಾಡಲಾಗುವುದು ಎಂದು ಇವೇ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.