ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್ಆರ್‌ಟಿಸಿ) ಮಂಗಳವಾರದಿಂದ ಬೆಂಗಳೂರು ಮತ್ತು ಮೈಸೂರಿನಿಂದ ಹೈದರಾಬಾದ್‌ಗೆ ಬಸ್ ಸೇವೆ ಪುನರಾರಂಭಿಸಲಿದೆ.
ಕೋವಿಡ್-19 ಹಾಗೂ ಲಾಕ್‍ಡೌನ್ ಕಾರಣದಿಂದ ಅಂತರರಾಜ್ಯ ಸಾರಿಗೆಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಇದೀಗ, ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಸ್‌ಗಳ ಕಾರ್ಯಾಚರಣೆ ಪುನರಾರಂಭಿಸಲಾಗುತ್ತಿದೆ. ಎಲ್ಲ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮುಂಗಡ ಆಸನಗಳನ್ನು www.ksrtc.in ವೆಬ್‌ಸೈಟ್ ಹಾಗೂ ನಿಗಮದ/ಫ್ರಾಂಚೈಸಿ ಕೌಂಟರ್‌ಗಳ ಮುಖಾಂತರ ಕಾಯ್ದಿರಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.