ADVERTISEMENT

ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌: ಇಲ್ಲಿದೆ ಟಿಕೆಟ್ ದರ, ವೇಳಾಪಟ್ಟಿ

​ಪ್ರಜಾವಾಣಿ ವಾರ್ತೆ
Published 29 ಮೇ 2025, 19:08 IST
Last Updated 29 ಮೇ 2025, 19:08 IST
   

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ(ಕೆಎಸ್‌ಆರ್‌ಟಿಸಿ) ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ‘ಬೆಂಗಳೂರು-ಶ್ರೀರಂಗಪಟ್ಟಣ-ಕಲ್ಲಹಳ್ಳಿ-ಮೇಲುಕೋಟೆ’ ಮಾರ್ಗದಲ್ಲಿ ವಾರಾಂತ್ಯದ ದಿನಗಳಾದ ಶನಿವಾರ ಮತ್ತು ಭಾನುವಾರ ಪ್ಯಾಕೇಜ್ ಪ್ರವಾಸ ಮೇ 31ರಂದು ಆರಂಭ
ಗೊಳ್ಳಲಿದೆ.

ಬೆಂಗಳೂರಿನಿಂದ ಬೆಳಿಗ್ಗೆ 6.30ಕ್ಕೆ ಹೊರಟು ರಾತ್ರಿ 8.15ಕ್ಕೆ ಬೆಂಗಳೂರಿಗೆ ವಾಪಸ್‌ ಆಗಲಿದೆ. ಈ 350 ಕಿಲೋಮೀಟರ್‌ ಪ್ರವಾಸಕ್ಕೆ  ಮುಂಗಡ ಬುಕ್ಕಿಂಗ್‌ ಸೇರಿ ವಯಸ್ಕರಿಗೆ ₹ 670 ಹಾಗೂ 6ರಿಂದ 12 ವರ್ಷದ ಮಕ್ಕಳಿಗೆ ₹ 500 ಟಿಕೆಟ್‌ ದರ ಇರಲಿದೆ.

ಟಿಕೆಟ್‌ಗೆ www.ksrtc.in ಅಥವಾ www.ksrtc.karnataka.gov.in ವೆಬ್‌ಸೈಟ್‌ ಸಂಪರ್ಕಿಸಬಹುದು.

ADVERTISEMENT


ಮಾಹಿತಿಗೆ ದೂರವಾಣಿ: 080-26252625, ಮೊಬೈಲ್‌: 7760990100/560/287 ಸಂಪರ್ಕಿಸಿ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.