
ಪ್ರಜಾವಾಣಿ ವಾರ್ತೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳನ್ನು ಹಂಚಿಕೆ ಮಾಡಿದ ಪ್ರಕಣದಲ್ಲಿ ಕಾಂಗ್ರೆಸ್ ಸಂಸದ ಕುಮಾರ ನಾಯಕ (ಅಂದಿನ ಮೈಸೂರು ಜಿಲ್ಲಾಧಿಕಾರಿ) ಅವರ ರಾಜೀನಾಮೆ ಪಡೆಯಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರ ರೂಪದಲ್ಲಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ ಅಂದು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಕುಮಾರ ನಾಯಕ ಅವರು ಕರ್ತವ್ಯಲೋಪ ಎಸಗಿದ್ದಾರೆ ಎಂದು ಲೋಕಾಯುಕ್ತ ವರದಿಯಲ್ಲಿ ಸಾಬೀತಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಕ್ಷಣ ಅವರ ರಾಜೀನಾಮೆ ಪಡೆಯಬೇಕು. ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಅಶೋಕ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.