ಬೆಂಗಳೂರು:ಎಸ್ಸಿ ಎಸ್ಟಿ ಬಡ್ತಿ ಮೀಸಲಾತಿ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಮಾಹಿತಿ ಪಡೆದುಅಡ್ವೋಕೇಟ್ ಜನರಲ್ ಬಳಿ ಚರ್ಚಿಸುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪಿನ ಕುರಿತಂತೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ,ಆದೇಶದ ಬಗ್ಗೆ ಸಂಪೂರ್ಣ ಮಾಹಿತಿ ಇನ್ನು ಲಭ್ಯವಾಗಿಲ್ಲ, ಅದನ್ನು ಓದಿಅಡ್ವೋಕೇಟ್ ಜನರಲ್ ಬಳಿ ಈ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.
ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರದ ಬಗ್ಗೆಯೂ ಮಾತುಕತೆ ನಡೆಸುತ್ತೇನೆ ಹಾಗೇಅದೇಶದ ಪ್ರತಿ ಪಡೆದು ಸಂಬಂಧಿಸಿದವರ ಬಳಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಅವರು ಮಾಹಿತಿ ನೀಡಿದರು.
ತೀರ್ಪು ಗಮನಿಸಿಲ್ಲ: ಬಡ್ತಿ ಮೀಸಲಾತಿ ಸಂಬಂಧ ಕೋರ್ಟ್‌ನ ತೀರ್ಪನ್ನು ಇನ್ನು ಗಮನಿಸಿಲ್ಲ, ತೀರ್ಪನ್ನು ಸಂಪೂರ್ಣವಾಗಿ ಪರಿಶೀಲಿಸಿ ನಂತರ ಪ್ರತಿಕ್ರಿಯಿಸುತ್ತೇನೆ ಎಂದುಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.