ಬೆಂಗಳೂರು:ರಾಜ್ಯವು ಬರದಿಂದ ತತ್ತರಿಸುವಾಗ ಸರ್ಕಾರ ಮೋಜು ಮಸ್ತಿಯಲ್ಲಿ ಮೈಮರೆತಿದೆ ಎಂದು ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ಮಾಡಿರುವಟೀಕೆ ಹಾಸ್ಯಾಸ್ಪದವಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಆರೋಗ್ಯ ಪ್ರವಾಸೋದ್ಯಮ ಪ್ರವರ್ಧಮಾನಕ್ಕೆ ಬರುತ್ತಿದ್ದು ಅಂತಹ ಒಂದು ಕೇಂದ್ರದಲ್ಲಿ ನಾನು ಚಿಕಿತ್ಸೆ ಪಡೆಯುತ್ತಿದ್ದೇನೆ ಯಡಿಯೂರಪ್ಪನವರು ಕೇವಲ ಸುದ್ದಿಗಾಗಿ ಇಂತಹ ಹೇಳಿಕೆಗಳನ್ನು ನೀಡುವ ಪ್ರವೃತ್ತಿಯನ್ನು ಕೈಬಿಡುವುದು ಒಳಿತು ಎಂದು ಕುಮಾರಸ್ವಾಮಿ ಸಲಹೆ ಮಾಡಿದ್ದಾರೆ.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅತ್ಯುತ್ತಮ ಅಧಿಕಾರಿಗಳಿದ್ದು ಅವರು ಈ ಅವಧಿಯಲ್ಲಿ ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ, ಬರಪರಿಹಾರ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಕಾರ್ಯದರ್ಶಿಗಳು ನಿಯಮಿತವಾಗಿ ಮಾಹಿತಿಯನ್ನೂ ನೀಡಿದ್ದಾರೆ. ಉಡುಪಿಗೆ ತೆರಳುವ ಮುನ್ನ ಮುಖ್ಯಕಾರ್ಯದರ್ಶಿಯವರೊಂದಿಗೆ ಮಾತನಾಡಿ ಅಗತ್ಯಸೂಚನೆಗಳನ್ನು ನೀಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಉಡುಪಿ ಸಮೀಪದ ಕಾಪುವಿನಲ್ಲಿರುವ ಆಯುರ್ವೇದ ಚಿಕಿತ್ಸಾಲಯದಲ್ಲಿ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.ಲೋಕಸಭಾ ಚುನಾವಣೆ ಮುಗಿದ ತಕ್ಷಣವೇ ಅವರು ಚಿಕಿತ್ಸೆಯ ಮೊರೆ ಹೋಗಿದ್ದಾರೆ.
ಇದನ್ನೂ ಓದಿ:ಆಯುರ್ವೇದ ಚಿಕಿತ್ಸೆಗಾಗಿ ಉಡುಪಿಗೆ ಕುಮಾರಸ್ವಾಮಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.