ADVERTISEMENT

ರೆಸಾರ್ಟ್‌ನಲ್ಲಿ ಕುಮಾರಸ್ವಾಮಿ ವಿಶ್ರಾಂತಿ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2018, 20:15 IST
Last Updated 10 ನವೆಂಬರ್ 2018, 20:15 IST
   

ಎಚ್‌.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯದ ಹಿನ್ನೀರಿನಲ್ಲಿರುವ ಆರೆಂಜ್‌ ಕೌಂಟಿ ರೆಸಾರ್ಟ್‌ನಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಾಸ್ತವ್ಯ ಹೂಡಿದ್ದಾರೆ.

ಶುಕ್ರವಾರ ತಡರಾತ್ರಿ ಪತ್ನಿ ಅನಿತಾ ಕುಮಾರಸ್ವಾಮಿ ಜೊತೆ ಬಂದಿರುವ ಅವರು ಶನಿವಾರ ವಾಯುವಿಹಾರ ನಡೆಸಿ ವಿಶ್ರಾಂತಿಗೆ ಮೊರೆ ಹೋದರು.

ರೆಸಾರ್ಟ್‌ಗೆ ಬಿಗಿ ಬಂದೋಬಸ್ತ್‌ ಕಲ್ಪಿಸಲಾಗಿದೆ. ಅವರ ಜೊತೆ ಬೆಂಗಳೂರಿನಿಂದ ವೈದ್ಯರೊಬ್ಬರು ಬಂದಿದ್ದಾರೆ. ಇನ್ನೂ ಎರಡು ದಿನ ಇಲ್ಲಿಯೇ ಉಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

‘ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಉಪಚುನಾವಣೆ ಸಂದರ್ಭದಲ್ಲಿ ಓಡಾಡಿ ದಣಿದಿದ್ದಾರೆ. ಹೀಗಾಗಿಯೇ, ಅವರು ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಮೈಸೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.