ADVERTISEMENT

ಕುಂಬ್ಳೆ ಸುಂದರ ರಾವ್, ಗೋಡೆ ನಾರಾಯಣ ಹೆಗಡೆಗೆ ಯಕ್ಷಮಂಗಳ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2019, 17:33 IST
Last Updated 8 ಮಾರ್ಚ್ 2019, 17:33 IST
ಕುಂಬ್ಳೆ ಸುಂದರ ರಾವ್‌, ಗೋಡೆ ನಾರಾಯಣ ಹೆಗಡೆ
ಕುಂಬ್ಳೆ ಸುಂದರ ರಾವ್‌, ಗೋಡೆ ನಾರಾಯಣ ಹೆಗಡೆ   

ಮುಡಿಪು: ಮಂಗಳೂರು ವಿಶ್ವವಿದ್ಯಾಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2018-19ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಹಾಗೂ ಕೃತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಮತ್ತು ತಾಳಮದ್ದಳೆಯ ಪ್ರಸಿದ್ಧ ಕಲಾವಿದರಾದ ಕುಂಬ್ಳೆ ಸುಂದರ ರಾವ್ ಹಾಗೂ ಬಡಗುತಿಟ್ಟಿನ ಹಿರಿಯ ಯಕ್ಷಗಾನ ವೇಷಧಾರಿ ಅವರು ಯಕ್ಷಮಂಗಳ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ವಿದ್ವಾಂಸರಾದ ಪ್ರೊ.ಜಿ.ಎಸ್.ಭಟ್ಟ ಸಾಗರ ಅವರ ‘ಯಕ್ಷಗಾನ ಅಂಗೋಪಾಂಗ ಸಮತೋಲನ ವಿಚಾರ’ ಕೃತಿಯು ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ.

ADVERTISEMENT

ಯಕ್ಷಮಂಗಳ ಪ್ರಶಸ್ತಿಯು ತಲಾ ₹25 ಸಾವಿರ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆಗಳನ್ನೊಳಗೊಂಡಿದೆ. ಯಕ್ಷಮಂಗಳ ಕೃತಿ ಪ್ರಶಸ್ತಿಯು ₹10 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪ್ರೊ.ಎಂ.ಎಲ್. ಸಾಮಗ, ಡಾ.ಚಂದ್ರಶೇಖರ್ ದಾಮ್ಲೆ, ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಹಾಗೂ ಡಾ.ಧನಂಜಯ ಕುಂಬ್ಳೆ ಅವರನ್ನೊಳಗೊಂಡ ಸಮಿತಿ ಸಾಧಕರನ್ನು ಆಯ್ಕೆ ಮಾಡಿದೆ.

‘ಯಕ್ಷಮಂಗಳ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ 15ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರು ವಿವಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ. ಮಂಗಳೂರು ವಿವಿ ಪ್ರಭಾರ ಕುಲಪತಿ ಪ್ರೊ.ಕಿಶೋರಿ ನಾಯಕ್ ಕೆ. ಅಧ್ಯಕ್ಷತೆ ವಹಿಸಲಿದ್ದಾರೆ. ಯಕ್ಷಗಾನ ಚಿಂತಕ ಡಾ.ಚಂದ್ರಶೇಖರ್ ದಾಮ್ಲೆ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರೊ.ಎಂ.ಎಲ್.ಸಾಮಗ ಅಭಿನಂದನಾ ಭಾಷಣ ಮಾಡಲಿದ್ದಾರೆ’ ಎಂದು ಮಂಗಳೂರು ವಿವಿ ಕುಲಸಚಿವ ಪ್ರೊ.ಎ.ಎಂ.ಖಾನ್ ಹಾಗೂ ಕೇಂದ್ರದ ಸಂಯೋಜಕರಾದ ಡಾ.ಧನಂಜಯ ಕುಂಬ್ಳೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.