ADVERTISEMENT

ಒಬಿಸಿ ಪಟ್ಟಿಗೆ ಕುಂಚಿಟಿಗ ಸಮುದಾಯದ ಮನವಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 19:31 IST
Last Updated 1 ಮಾರ್ಚ್ 2021, 19:31 IST
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಅವರನ್ನು ಕುಂಚಿಟಿಗ ಮಹಾಸಭಾದ ಅಧ್ಯಕ್ಷ ಮುರಳೀಧರ ಹಾಲಪ್ಪ ನೇತತ್ವದ ನಿಯೋಗ ಸೋಮವಾರ ಭೇಟಿ ಮಾಡಿ ಕುಲಶಾಸ್ತ್ರೀಯ ಅಧ್ಯಯನ ವರದಿ ಶಿಫಾರಸು ಅನುಷ್ಠಾನಕ್ಕೆ ಒತ್ತಾಯಿಸಿತು. ಆಯೋಗದ ಸದಸ್ಯ ಅರುಣ್‌ ಕುಮಾರ್‌, ಕುಂಚಿಟಿಗ ಸಮುದಾಯದ ಮುಖಂಡರಾದ ನಾಗರಾಜಯ್ಯ, ಆಯೋಗದ ಸದಸ್ಯ ರಾಜಶೇಖರ್‌ ಇದ್ದರು –ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಕುಂಚಿಟಿಗ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ಸಮಿತಿ ಸೂಚಿಸಿದಂತೆ ಕೇಂದ್ರದ ಹಿಂದುಳಿದ ವರ್ಗಗಳ ಜಾತಿ (ಒಬಿಸಿ) ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು. ರಾಜ್ಯ ಹಿಂದುಳಿದ ವರ್ಗಗಳ ಪ್ರವರ್ಗ 3ಎಯಿಂದ ಪ್ರವರ್ಗ–1ಕ್ಕೆ ಸೇರಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಬಳಿ ಕುಂಚಿಟಿಗರ ಮಹಾಸಭಾ ಮನವಿ ಮಾಡಿದೆ.

ಹೆಗ್ಡೆ ಅವರನ್ನು ಸೋಮವಾರ ಭೇಟಿ ಮಾಡಿದ ಮಹಾಸಭಾದಅಧ್ಯಕ್ಷ ಮುರಳೀಧರ ಹಾಲಪ್ಪ ನೇತೃತ್ವದ ನಿಯೋಗ ಮನವಿ ಸಲ್ಲಿಸಿದೆ.

‘ರಾಜ್ಯ ಸರ್ಕಾರ 17 ಜಿಲ್ಲೆಗಳ 37 ತಾಲ್ಲೂಕುಗಳಲ್ಲಿ ₹ 8 ಲಕ್ಷ ವೆಚ್ಚ ಮಾಡಿ ಕುಂಚಿಟಿಗ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ನಡೆಸಿದೆ. ಅಲ್ಲದೆ, ಸಮುದಾಯದ ಸ್ಥಿತಿಗತಿಯ ಸಮಗ್ರ ಮಾಹಿತಿಗಳನ್ನು ಒಳಗೊಂಡ 362 ಪುಟಗಳ ವರದಿ ಮತ್ತು ಅದರ ಆಧಾರದಲ್ಲಿ ಸಮುದಾಯವನ್ನು ಓಬಿಸಿ ಪಟ್ಟಿಗೆ ಸೇರಿಸುವಂತೆ ಕೇಂದ್ರ ಹಿಂದುಳಿದ ವರ್ಗಗಳ ಆಯೋಗಕ್ಕೆ (ಎನ್‌ಸಿಬಿಸಿ) ರಾಜ್ಯ ಹಿಂದುಳಿದ ವರ್ಗಗಳ ಇಲಾಖೆ ಶಿಫಾರಸು ಮಾಡಿತ್ತು’ ಎಂದು ಮುರಳೀಧರ ಹಾಲಪ್ಪ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.