ಕೊಲ್ಲೂರು ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ
ಕುಂದಾಪುರ: ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗುರುವಾರ ಭೇಟಿ ನೀಡಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಪತ್ನಿ ಉಷಾ ಹಾಗೂ ಪುತ್ರಿ ಐಶ್ವರ್ಯಾ ಅವರೊಂದಿಗೆ ಬಂದಿದ್ದ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು.
ಮೀನುಗಾರಿಕಾ ಸಚಿವ ಮಾಂಕಾಳ ವೈದ್ಯ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಜೊತೆಗಿದ್ದರು.
ಅರ್ಚಕರಾದ ಎನ್. ನರಸಿಂಹ ಅಡಿಗ, ಶ್ರೀಧರ ಅಡಿಗ, ಎನ್.ಸುಬ್ರಮಣ್ಯ ಅಡಿಗ, ವಿಘ್ನೇಶ್ವರ ಅಡಿಗ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.