ADVERTISEMENT

ಕುರುಬ ಸಮುದಾಯದ ಮುಖಂಡರಿಂದ ಸಿ.ಎಂ ಭೇಟಿ; ಮೂವರಿಗೆ ಸಚಿವ ಸ್ಥಾನದ ಬೇಡಿಕೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 10:24 IST
Last Updated 27 ನವೆಂಬರ್ 2020, 10:24 IST
ಕುರುಬ ಸಮುದಾಯದ ಮುಖಂಡರ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿತ್ತು.
ಕುರುಬ ಸಮುದಾಯದ ಮುಖಂಡರ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿತ್ತು.   

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕು, ಕುರುಬ ಅಭಿವೃದ್ಧಿ ನಿಗಮ ಸ್ಥಾಪಿಸಿ ₹500 ಕೋಟಿ ಅನುದಾನ ನೀಡಬೇಕು ಮತ್ತು ಮೂವರು ಕುರುಬ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂಬ ಬೇಡಿಕೆಗಳನ್ನು ಕುರುಬ ಸಮುದಾಯದ ಮುಖಂಡರ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮುಂದಿಟ್ಟಿದೆ.

ಕಾಗಿನೆಲೆ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುರುಬ ಸಮುದಾಯದ ಜನಪ್ರತಿನಿಧಿಗಳು ಮತ್ತು ಮುಖಂಡರ ನಿಯೋಗ ಮೂರು ಬೇಡಿಕೆಗಳುಳ್ಳ ಮನವಿ ಸಲ್ಲಿಸಿತು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ‘ಮೂರು ಬೇಡಿಕೆಗಳನ್ನು ಮುಖ್ಯಮಂತ್ರಿಯವರ ಮುಂದಿಟ್ಟಿದ್ದೇವೆ. ಕುರುಬ ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದೇವೆ’ ಎಂದರು.

ADVERTISEMENT

ವಿಧಾನ ಪರಿಷತ್ ಸದಸ್ಯರಾದ ಎಂ.ಟಿ.ಬಿ. ನಾಗರಾಜ್, ಆರ್. ಶಂಕರ್ ನಿಯೋಗದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.