ADVERTISEMENT

ಕೃಷಿ ಉತ್ಪನ್ನಗಳ ಖರೀದಿ: ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಕುರುಬೂರು ಆರೋಪ

​ಪ್ರಜಾವಾಣಿ ವಾರ್ತೆ
Published 6 ಜೂನ್ 2022, 14:05 IST
Last Updated 6 ಜೂನ್ 2022, 14:05 IST

ನವದೆಹಲಿ: ‘ರಾಗಿ, ಭತ್ತ ಸೇರಿದಂತೆ ವಿವಿಧ ಕೃಷಿ ಉತ್ಪನ್ನಗಳಖರೀದಿಗೆ ನೀಡುವ ಅನುದಾನದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ’ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಆರೋಪಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೇರೆ ರಾಜ್ಯಗಳಿಗೆ ಶೇ 35ರಷ್ಟು ಅನುದಾನ ಕೊಟ್ಟರೆ ಕರ್ನಾಟಕಕ್ಕೆ ಶೇ 3ರಷ್ಟು ಮಾತ್ರ ಅನುದಾನ ನೀಡಲಾಗಿದೆ. ಅಕ್ಟೋಬರ್‌ನಲ್ಲೇ ಖರೀದಿ ಕೇಂದ್ರ ಆರಂಭಕ್ಕೆ ಒಪ್ಪಿಗೆ ನೀಡಬೇಕು’ ಎಂದು ಆಗ್ರಹಿಸಿದರು.

‘ಸಿಬಿಲ್‌ ಮಾನದಂಡ ಅನುಸರಿಸಿ ರೈತರಿಗೆ ಕೃಷಿ ಸಾಲ ನೀಡಲಾಗುತ್ತಿದೆ. ಅತಿವೃಷ್ಟಿ. ಅನಾವೃಷ್ಟಿ ಉಂಟಾದಾಗ ರೈತರಿಗೆ ಸಕಾಲಕ್ಕೆ ಸಾಲ ಮರುಪಾವತಿ ಮಾಡಲು ಆಗುವುದಿಲ್ಲ. ಹೀಗಾಗಿ, ಕೃಷಿ ಸಾಲಕ್ಕೆ ಸಿಬಿಲ್‌ ಮಾನದಂಡ ಅನುಸರಿಸಬಾರದು’ ಎಂದು ಒತ್ತಾಯಿಸಿದರು.

ADVERTISEMENT

ಕಬ್ಬಿನ ಉತ್ಪಾದನಾ ವೆಚ್ಚ ಹೆಚ್ಚಾಗಿರುವುದರಿಂದ 2022–23ನೇ ಸಾಲಿನಲ್ಲಿ ಕಬ್ಬಿನ ಎಫ್‌ಆರ್‌ಪಿ ದರವನ್ನು ಕನಿಷ್ಠ ₹3500 ಕ್ಕೆ ಏರಿಸಬೇಕು. ಕಬ್ಬಿನಿಂದ ಉತ್ಪಾದಿಸುವ ಎಥನಾಲ್‌ನ ಲಾಭಾಂಶವನ್ನು ರೈತರಿಗೆ ಹಂಚಿಕೆ ಮಾಡಬೇಕು. ಈ ಬಗ್ಗೆ ಕಾನೂನು ತರಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.