ADVERTISEMENT

ರಾಷ್ಟ್ರಮಟ್ಟದ ಕೆವಿಪಿವೈ ಪರೀಕ್ಷೆ: 51ನೇ ರ‍್ಯಾಂಕ್

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2019, 19:34 IST
Last Updated 24 ಏಪ್ರಿಲ್ 2019, 19:34 IST
ಮದನ್‌ ವೈ.ಎನ್‌.
ಮದನ್‌ ವೈ.ಎನ್‌.   

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಮದನ್ ವೈ.ಎನ್. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಕೆವಿಪಿವೈ ಸ್ಪರ್ಧಾತ್ಮಕ ಪರೀಕ್ಷೆಯ ಸಂದರ್ಶನದಲ್ಲಿ ಪಾಲ್ಗೊಂಡು 51ನೇ ರ‍್ಯಾಂಕ್‌ ಪಡೆದಿದ್ದಾನೆ.

2018ರ ನವೆಂಬರ್‌ನಲ್ಲಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದು ಇತ್ತೀಚೆಗೆ ನಡೆದ ಸಂದರ್ಶನದಲ್ಲಿ ಪಾಲ್ಗೊಂಡು ಈ ಸಾಧನೆಯನ್ನು ಮಾಡಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT