ADVERTISEMENT

ಇದೇ 31ರಂದು ನಿವೃತ್ತಿಯಾಗಲಿರುವ ಎಲ್‌.ಕೆ. ಅತೀಕ್‌ ಫೆ. 1ರಿಂದ ಸಿಎಂ ಎಸಿಎಸ್‌

​ಪ್ರಜಾವಾಣಿ ವಾರ್ತೆ
Published 20 ಜನವರಿ 2025, 13:53 IST
Last Updated 20 ಜನವರಿ 2025, 13:53 IST
<div class="paragraphs"><p>ಎಲ್‌.ಕೆ. ಅತೀಕ್‌</p></div>

ಎಲ್‌.ಕೆ. ಅತೀಕ್‌

   

ಬೆಂಗಳೂರು: ಇದೇ 31ರಂದು ನಿವೃತ್ತರಾಗಲಿರುವ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌.ಕೆ. ಅತೀಕ್‌ ಅವರನ್ನು ಫೆ. 1ರಿಂದ ಅನ್ವಯವಾಗುವಂತೆ ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಸದ್ಯ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜವಾಬ್ದಾರಿಯ ಜೊತೆಗೆ ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿಯೂ ಅತೀಕ್‌ ಅವರು ಕರ್ತವ್ಯ ನಿಭಾಯಿಸುತ್ತಿದ್ದಾರೆ.

ADVERTISEMENT

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್‌ ಅವರಿಗೆ ತಾತ್ಕಾಲಿಕವಾಗಿ ಹೊಸತಾಗಿ ಸೃಜಿಸಿದ ಆರ್ಥಿಕ ಇಲಾಖೆ ವಿಶೇಷ ಕರ್ತವ್ಯಾಧಿಕಾರಿ ಹುದ್ದೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹೆಚ್ಚುವರಿಯಾಗಿ ನೀಡಲಾಗಿದೆ. ಅಲ್ಲದೆ, ಅತೀಕ್‌ ಅವರ ನಿವೃತ್ತಿಯಿಂದ ತೆರವಾಗಲಿರುವ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ರಿತೇಶ್‌ ಕುಮಾರ್‌ ಸಿಂಗ್‌ ಅವರನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.