ADVERTISEMENT

ಪಿಯುಸಿ ಫಲಿತಾಂಶ ಕುಸಿತಕ್ಕೆ ಉಪನ್ಯಾಸಕರ ಕೊರತೆ ಕಾರಣ: ಸಿದ್ದರಾಮಯ್ಯ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 12:04 IST
Last Updated 15 ಜುಲೈ 2020, 12:04 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು:ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಉಪನ್ಯಾಸಕರ ಕೊರತೆಯೇ ಕಾರಣ ಎನ್ನುವುದು ಸತ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಈ ಸಂಬಂಧ ಪ್ರಜಾವಾಣಿ ವರದಿಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಅವರು, ಈ ಹಿನ್ನಡೆಯ ಹೊಣೆಯನ್ನು ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಿರುವ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರೇ ಹೊರಬೇಕು ಎಂದಿದ್ದಾರೆ.

ಪಿಯುಸಿ ಉಪನ್ಯಾಸಕರ ಹುದ್ದೆಗೆ 2018 ರಲ್ಲಿ ಬರೆದಿದ್ದ ಪರೀಕ್ಷೆಯಲ್ಲಿ ಉತ್ತೀರ್ಣರಾದ 1,298 ಅಭ್ಯರ್ಥಿಗಳ ಆಯ್ಕೆ ಪಟ್ಟಿ ಅಂತಿಮವಾಗಿತ್ತು. ಆದರೆ ಸುರೇಶ್‌ಕುಮಾರ್ ಮಧ್ಯ ಪ್ರವೇಶಿಸಿ ಸ್ಥಳ ನಿಯುಕ್ತಿ ಕೌನ್ಸೆಲಿಂಗ್‌ ಪ್ರಕ್ರಿಯೆ ಸ್ಥಗಿತಗೊಳಿಸಿರುವುದು ಅಭ್ಯರ್ಥಿಗಳಿಗಷ್ಟೇ ಅಲ್ಲ ವಿದ್ಯಾರ್ಥಿಗಳಿಗೂ ಮಾಡಿರುವ ಅನ್ಯಾಯ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.