ADVERTISEMENT

ಕಾವೇರಿಯಲ್ಲಿ ನೀರಿನ ಕೊರತೆ | ಮುಂದೆ ಬಿತ್ತನೆ, ನಾಟಿ ಮಾಡದಂತೆ ಸೂಚನೆ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2023, 15:39 IST
Last Updated 5 ಅಕ್ಟೋಬರ್ 2023, 15:39 IST
<div class="paragraphs"><p>ಡಿಕೆಶಿ</p></div>

ಡಿಕೆಶಿ

   

ಬೆಂಗಳೂರು: ‘ಕಾವೇರಿ ಕಣಿವೆ ಪ್ರದೇಶದಲ್ಲಿ ನಮಗೆ 106 ಟಿಎಂಸಿ ಅಡಿ ನೀರಿನ ಅಗತ್ಯವಿದ್ದು, ಸದ್ಯಕ್ಕೆ 56 ಟಿಎಂಸಿ ಅಡಿ ನೀರು ಇದೆ. ರಾಜ್ಯದಲ್ಲಿ ಬರ ಘೋಷಣೆಯಾಗಿದ್ದು, ಮುಂದೆ ಯಾವುದೇ ಬಿತ್ತನೆ, ನಾಟಿ ಮಾಡಬಾರದು ಎಂದು ರೈತರಿಗೆ ಸೂಚಿಸಿದ್ದೇವೆ’ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಎರಡು ದಿನ ಮಳೆ ಸುರಿದ ಕಾರಣ ಅ. 1ರಂದು 13 ಸಾವಿರ, 2ರಂದು 23 ಸಾವಿರ, 3ರಂದು 20 ಸಾವಿರ, 4ರಂದು 15 ಸಾವಿರ, 5ರಂದು 10 ಸಾವಿರ ಕ್ಯೂಸೆಕ್ ನೀರು ಒಳಹರಿವು ಮೂಲಕ ಕೆಆರ್‌ಎಸ್‌ನಲ್ಲಿ ಸಂಗ್ರಹವಾಗಿದೆ ’ ಎಂದರು.

ADVERTISEMENT

‘ಮುಂದಿನ ತಿಂಗಳು ಮಳೆ ಬೀಳುವ ಸಾಧ್ಯತೆ ಇದೆ. ಇದು ಸಂಕಷ್ಟದ ವರ್ಷ’ ಎಂದರು.

‘ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡಲು ನಮ್ಮಲ್ಲಿ ನೀರಿಲ್ಲ ಎಂದು ಮೇಲ್ಮನವಿ ಸಲ್ಲಿಸಿದ್ದೇವೆ. ಮೇಕೆದಾಟು ಯೋಜನೆ ಜಾರಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು, ಅದಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರ ಅನುಮತಿ ಪಡೆಯಲು ಸಿದ್ಧತೆ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.