ADVERTISEMENT

ವಿದ್ಯಾರ್ಥಿಗಳ ಭವಿಷ್ಯದಲ್ಲಿ ಆಟವಾಡಲು ಅಧಿಕಾರ ಕೊಟ್ಟವರ‍್ಯಾರು? ಸಿಎಂಗೆ ಜೆಡಿಎಸ್‌

ಹಿಮ್ಸ್‌ನಲ್ಲಿ ಬೋಧಕರ ಕೊರತೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 15:34 IST
Last Updated 4 ಫೆಬ್ರುವರಿ 2023, 15:34 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಹಾವೇರಿ: ಇಲ್ಲಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ವಿದ್ಯಾರ್ಥಿಗಳು ದಾಖಲಾಗಿ ಒಂದೂವರೆ ತಿಂಗಳಾದರೂ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕರನ್ನು ಸರ್ಕಾರ ನೇಮಕಾತಿ ಮಾಡಿಲ್ಲ. 150 ವಿದ್ಯಾರ್ಥಿಗಳ ಭವಿಷ್ಯದಲ್ಲಿ ಆಟವಾಡಲು ನಿಮಗೆ ಅಧಿಕಾರ ಕೊಟ್ಟವರು ಯಾರು ಮುಖ್ಯಮಂತ್ರಿಗಳೇ? ಎಂದು ಜೆಡಿಎಸ್‌ ತನ್ನ ಟ್ವಿಟ್ಟರ್‌ ಖಾತೆಯಲ್ಲಿ ಪ್ರಶ್ನಿಸಿದೆ.

ಪ್ರಜಾವಾಣಿಯಲ್ಲಿ ಫೆ.4ರಂದು ಪ್ರಕಟವಾದ ‘150 ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ’ ಶೀರ್ಷಿಕೆಯ ವಿಶೇಷ ವರದಿಯ ಸಾಫ್ಟ್‌ ಕಾಪಿಯನ್ನು ಲಗತ್ತಿಸಿ, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ವೈದ್ಯರಾಗಬೇಕು ಎಂಬ ಕನಸಿರುವ ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಸೇರುತ್ತಾರೆ. ಸರಿಯಾದ ಕಟ್ಟಡವಿಲ್ಲದೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಮೆಡಿಕಲ್‌ ಕಾಲೇಜು ನಡೆಯುತ್ತಿದೆ. ಖಾಸಗಿ ವೈದ್ಯಕೀಯ ಕಾಲೇಜಿನಿಂದ ಲಂಚ ಪಡೆದು ಬಡ ಪ್ರತಿಭಾವಂತ ಮಕ್ಕಳು ವೈದ್ಯರಾಗದಂತೆ ದಂಧೆ ನಡೆಸುತ್ತಿದ್ದೀರಾ? ಎಂದು ಖಾರವಾಗಿ ಪ್ರಶ್ನಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.