ಬೆಂಗಳೂರು: ಕೆರೆಗಳ ಬಫರ್ ವಲಯಕ್ಕೆ ಸಂಬಂಧಿಸಿದ ತಿದ್ದುಪಡಿ ಮಸೂದೆ ಕುರಿತಂತೆ ಕಾನೂನು ತಜ್ಞರ ಸಲಹೆಯೊಂದಿಗೆ ರಾಜ್ಯಪಾಲರಿಗೆ ವಿವರಣೆಯನ್ನು ಶೀಘ್ರವೇ ಸಲ್ಲಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.
‘ವೈಜ್ಞಾನಿಕ ಅಧ್ಯಯನದ ಮೂಲಕ ಐತಿಹಾಸಿಕ ತಿದ್ದುಪಡಿ ತರಲಾಗಿದೆ. ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆ ಹಾಗೂ ಸಂಬಂಧಿಸಿದ ಇಲಾಖೆಗಳ ಕಾರ್ಯದರ್ಶಿಗಳು ಸದಸ್ಯರಾಗಿದ್ದ ಸಮಿತಿಯು ನಿರ್ಧಾರದಂತೆ ತಿದ್ದುಪಡಿ ಮಸೂದೆಯನ್ನು ಸಿದ್ದಪಡಿಸಿ ಉಭಯ ಸದನದಲ್ಲೂ ಒಪ್ಪಿಗೆ ಪಡೆಯಲಾಗಿದೆ. ಬೆಂಗಳೂರಿನ ಸಂಸ್ಥೆಯೊಂದರ ದೂರನ್ನು ಆಧರಿಸಿ, ರಾಜ್ಯಪಾಲರು ವಿವರಣೆ ಕೇಳಿದ್ದಾರೆ’ ಎಂದು ಹೇಳಿದ್ದಾರೆ.
ತಿದ್ದೋಲೆ: ‘ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ– 2025ಕ್ಕೆ ತಿದ್ದೋಲೆಯನ್ನು ತರಲಾಗಿದೆ’ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ.
ಕೆರೆಗಳ ಬಫರ್ ವಲಯವನ್ನು ಮರುನಿಗದಿಪಡಿಸಿದ ತಿದ್ದೋಲೆ ಇದಾಗಿದೆ. ಕೆರೆಯ ಕಂದಾಯ ಗಡಿಯಿಂದ ಬಫರ್ ವಲಯವನ್ನು ಮೀಟರ್‌ಗಳಲ್ಲಿ ನಿಗದಿಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.