ADVERTISEMENT

ಕೆರೆಗಳ ‘ಬಫರ್‌ ವಲಯ’ ಕಡಿತ: ಸರ್ಕಾರಕ್ಕೆ ಎನ್‌ಜಿಟಿ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2025, 15:51 IST
Last Updated 9 ಆಗಸ್ಟ್ 2025, 15:51 IST
<div class="paragraphs"><p>ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ)</p></div>

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ)

   

ನವದೆಹಲಿ: ಕರ್ನಾಟಕದಲ್ಲಿ ಕೆರೆಗಳ ಬಫರ್‌ ವಲಯ ಕಡಿತ ಮಾಡಲು ಸಚಿವ ಸಂಪುಟ ತೀರ್ಮಾನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಪ್ರಧಾನ ಪೀಠ ನೋಟಿಸ್‌ ನೀಡಿದೆ. 

ಜುಲೈ 28ರಂದು ಮಾಧ್ಯಮವೊಂದರಲ್ಲಿ ಪ್ರಕಟವಾದ ವರದಿ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ನ್ಯಾಯಮೂರ್ತಿ ಪ್ರಕಾಶ್‌ ಶ್ರೀವಾಸ್ತವ ಹಾಗೂ ಎ.ಸೆಂಥಿಲ್‌ ವೇಲ್‌ ಅವರ ಪೀಠವು, ಪರಿಸರ ಇಲಾಖೆ ಕಾರ್ಯದರ್ಶಿ, ಕರ್ನಾಟಕ ಸರೋವರ ಸಂರಕ್ಷಣಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಪ್ರತಿವಾದಿಗಳನ್ನಾಗಿ ಮಾಡಿದೆ. 

ADVERTISEMENT

ಪ್ರಕರಣವನ್ನು ದಕ್ಷಿಣ ವಲಯ ಪೀಠಕ್ಕೆ ವರ್ಗಾಯಿಸುವ ಪ್ರಧಾನ ಪೀಠವು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್‌ 26ಕ್ಕೆ ನಿಗದಿಪಡಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.