ಬೆಂಗಳೂರು: ಗೃಹಲಕ್ಷ್ಮಿಯರಿಗೆ ಇನ್ನಷ್ಟು ಆರ್ಥಿಕ ಶಕ್ತಿ ತುಂಬಲು ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಮಾದರಿಯಲ್ಲಿ ಜಂಟಿ ಹೊಣೆಗಾರಿಕೆ ಗುಂಪುಗಳನ್ನು ರಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಇಲಾಖೆಯ ಉನ್ನತಮಟ್ಟದ ಅಧಿಕಾರಿಗಳು, ಬ್ಯಾಂಕ್ ಪ್ರತಿನಿಧಿಗಳ ಜತೆ ಬುಧವಾರ ನಡೆದ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ಜಾರಿಯಾದ ನಂತರ ಪ್ರತಿ ಫಲಾನುಭವಿ ಕುಟುಂಬದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸುತ್ತಿದೆ. ಗೃಹಲಕ್ಷ್ಮಿ ಯೋಜನೆ ಈಗಾಗಲೇ ಜನಪ್ರಿಯಗೊಂಡಿದ್ದು, ಫಲಾನುಭವಿಗಳನ್ನು ಒಳಗೊಂಡ ಜಂಟಿ ಹೊಣೆಗಾರಿಕೆ ಗುಂಪುಗಳನ್ನು ರಚಿಸಲು ನಿರ್ಧರಿಸಲಾಗಿದೆ. ಶೀಘ್ರ ಅಂತಿಮ ರೂಪು ರೇಷೆ ಸಿದ್ಧಪಡಿಸಲಾಗುವುದು. ಆರಂಭದಲ್ಲಿ ಪ್ರಾಯೋಗಿಕವಾಗಿ 500 ಗುಂಪುಗಳನ್ನು ರಚಿಸಲಾಗುವುದು ಎಂದರು.
ಕರ್ನಾಟಕದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭಗೊಂಡು 50 ವರ್ಷವಾಗಿದೆ. ಅ.2ರಂದು ಸುವರ್ಣ ಮಹೋತ್ಸವ ಸಮಾರಂಭ ನಡೆಯಲಿದ್ದು, ಈ ವೇಳೆಗೆ ಜಂಟಿ ಹೊಣೆಗಾರಿಗೆ ಗುಂಪುಗಳ ರಚನೆಗೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.