ADVERTISEMENT

ರಾಜ್ಯದ ಎಲ್ಲ ಗರ್ಭಿಣಿಯರಿಗೂ ಸಾಮೂಹಿಕ ಸೀಮಂತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2025, 12:42 IST
Last Updated 24 ಮಾರ್ಚ್ 2025, 12:42 IST
<div class="paragraphs"><p>ಬೆಳಗಾವಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ನೆರವೇರಿಸಿದರು </p></div>

ಬೆಳಗಾವಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ನೆರವೇರಿಸಿದರು

   

ಪ್ರಜಾವಾಣಿ ಚಿತ್ರ

ಬೆಳಗಾವಿ: ‘ರಾಜ್ಯದ ಎಲ್ಲ ಗರ್ಭಿಣಿಯರಿಗೂ 2026ರ ಮಾರ್ಚ್‌ನಿಂದ ಜಿಲ್ಲಾವಾರು ಸಾಮೂಹಿಕ ಸೀಮಂತ ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಲಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ADVERTISEMENT

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ, ನಗರದಲ್ಲಿ ಸೋಮವಾರ ಆಯೋಜಿಸಿದ್ದ ‘3,000 ಮಹಿಳೆಯರಿಗೆ ಸಾಮೂಹಿಕ ಸೀಮಂತ’ ನೆರವೇರಿಸಿ ಅವರು ಮಾತನಾಡಿದರು.

‘ಸೀಮಂತ ಭಾರತೀಯ ಸಂಸ್ಕೃತಿಯ ಭಾಗ. ಗರ್ಭಿಣಿ ಆರೋಗ್ಯವಂತರಾಗಿದ್ದರೆ ಆರೋಗ್ಯವಂತ ಮಕ್ಕಳು ಜನಿಸುತ್ತವೆ. ಆಗ ಆರೋಗ್ಯವಂತ ದೇಶ ನಿರ್ಮಾಣವಾಗುತ್ತದೆ. ಸಾಮೂಹಿಕ ಸೀಮಂತದಂಥ ಕಾರ್ಯಕ್ರಮಗಳ ಮೂಲಕ ಗರ್ಭಿಣಿಯರು ಹಾಗೂ ಅವರ ಕಂದಮ್ಮಗಳ ಆರೋಗ್ಯದ ಬಗ್ಗೆಯೂ ಸರ್ಕಾರ ಕಾಳಜಿ ತೋರಲು ಮುಂದಾಗಿದೆ. ಈ ದೇಶದ ಭವಿಷ್ಯವನ್ನು ತಮ್ಮ ಗರ್ಭದಲ್ಲಿ ಇರಿಸಿಕೊಂಡ ಹೆಣ್ಣುಮಕ್ಕಳ ಆರೋಗ್ಯ ಕಾಪಾಡಲು ಕಾಂಗ್ರೆಸ್‌ ಸರ್ಕಾರ ಬದ್ಧವಾಗಿದೆ’ ಎಂದರು.

ಇದೇ ವೇಳೆ ಕ್ಷೇತ್ರದ 100 ಅಂಗವಿಕಲರಿಗೆ ಬ್ಯಾಟರಿ ಚಾಲಿತ ಗಾಲಿಕುರ್ಚಿ, ಬ್ರೈಲ್ ವಾಚ್, ಲ್ಯಾಪ್‌ಟಾಪ್‌ಗಳನ್ನು ನೀಡಿದರು. ಸ್ತ್ರೀಶಕ್ತಿ ಗುಂಪುಗಳ ವಿಭಾಗೀಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಸಚಿವೆ ಉದ್ಘಾಟಿಸಿದರು.

‘ಲಕ್ಷ್ಮೀ ಮುಖ್ಯಮಂತ್ರಿ ಆಗಲಿ’ ಎಂದ ಅಧಿಕಾರಿ!

‘ಲಕ್ಷ್ಮೀ ಹೆಬ್ಬಾಳಕರ ಅವರು ಮಂತ್ರಿ ಆದ ಬಳಿಕ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶವೂ ಬರಲಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್‌.ನಾಗರಾಜ ಹೇಳಿದರು.

ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಅವರು ಸಚಿವರನ್ನು ಹೀಗೆ ಹೊಗಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.