
ಪ್ರಜಾವಾಣಿ ವಾರ್ತೆಬೆಂಗಳೂರು: ಚಿತ್ರಕಲೆಯನ್ನು ಉತ್ತೇಜಿ ಸುವ ದೃಷ್ಟಿಯಿಂದ ಕರ್ನಾಟಕ ಲಲಿತ ಕಲಾ ಅಕಾಡೆಮಿಯು ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.
ಬಿ.ಎಫ್.ಎ, ಎಂ.ಎಫ್.ಎ ಶಿಕ್ಷಣಕ್ಕೆ ಸಂಬಂಧಿಸಿದಂತೆ ಅಭ್ಯಸಿಸುತ್ತಿರುವ 18 ರಿಂದ 23 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಸ್ವ ವಿವರದ ಜತೆಗೆ ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ 5x6 ಅಳತೆಯ ನಾಲ್ಕು ಚಿತ್ರ ಕಲಾಕೃತಿಗಳನ್ನು ಸಲ್ಲಿಸಬೇಕು. ಶಾಲಾ–ಕಾಲೇಜುಗಳ ಮುಖ್ಯಸ್ಥರ ಶಿಫಾರಸು ಮೂಲಕ ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು–560 002 ಈ ವಿಳಾಸಕ್ಕೆ ಫೆ.6ರೊಳಗೆ ಸಲ್ಲಿಸಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.