
ಪ್ರಜಾವಾಣಿ ವಾರ್ತೆ
ದಾವಣಗೆರೆ: ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ ಆರೋಪದಡಿ ಬಂಡಾಯ ಸಾಹಿತಿ ಬಿ.ಟಿ. ಲಲಿತಾ ನಾಯಕ್ ವಿರುದ್ಧ ಇಲ್ಲಿನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ರಾಮಾಯಣದಲ್ಲಿರುವ ಶ್ರೀರಾಮ, ಲಕ್ಷ್ಮಣ, ರಾವಣರು ಆದರ್ಶರಲ್ಲ. ಅವರು ಕ್ರೂರಿಗಳು’ ಎಂದು ಇಲ್ಲಿ ಈಚೆಗೆ ನಡೆದ ವಿಚಾರ ಸಂಕಿರಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 299 (ಧಾರ್ಮಿಕ ಭಾವನೆಗೆ ಧಕ್ಕೆ), ಸೆಕ್ಷನ್ 353 (ಸಾರ್ವಜನಿಕವಾಗಿ ಅವಹೇಳನ) ಹಾಗೂ ಸೆಕ್ಷನ್ 352 (ಶಾಂತಿ ಕದಡಲು ಉದ್ದೇಶಪೂರ್ವ ಯತ್ನ) ಅಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.