ಕೈಗಾರಿಕೆಗಳು ರೈತರಿಗೆ ಅನ್ನ, ಶಿಕ್ಷಣ ಕೊಡುತ್ತದೆಯೇ? ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೈಗಾರಿಕೆಗೆ ಭೂಮಿ ಸ್ವಾಧೀನ ವಿರೋಧಿಸಿ ರೈತರು ಮೂರು ವರ್ಷ ಹೋರಾಟ ನಡೆಸಿದರು. ರೈತ ನಾಯಕರ ಸಮಕ್ಷಮದಲ್ಲಿ ಈ ಅಧಿಸೂಚನೆ ವಾಪಸ್ ಪಡೆಯುತ್ತೇವೆ ಎಂದು ಹೇಳಿ ಸರ್ಕಾರ ಎರಡು ತಿಂಗಳಾಯಿತು. ಆದರೂ ಅಧಿಸೂಚನೆ ವಾಪಸ್ ಪಡೆದಿಲ್ಲ. ನಾಚಿಕೆ ಆಗಬೇಕು ಈ ಸರ್ಕಾರಕ್ಕೆ. ಬಂಡವಾಳಶಾಹಿಗಳಿಗೆ, ರಿಯಲ್ ಎಸ್ಟೇಟ್‌ನವರಿಗೆ ಗುಲಾಮಗಿರಿ ಮಾಡುತ್ತೀರಿ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಕಿಡಿಕಾರಿದರು. ಚಿಕ್ಕಬಳ್ಳಾಪುರದಲ್ಲಿ ನಡೆದ ಜಲಾಗ್ರಹ ಸಮಾವೇಶದಲ್ಲಿ ಮಾತನಾಡಿದ ಅವರು, ‘ನಾನು ಎರಡನೇ ಅವಧಿಗೆ ಸಿ.ಎಂ ಆದೆ ಎಂದು ಮುಖ್ಯಮಂತ್ರಿ ಜಂಭ ಕೊಚ್ಚಿಕೊಳ್ಳುತ್ತಾರೆ. ಆದರೆ ಈ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ನೀಡಲು ಸಾಧ್ಯವಾಗಿಲ್ಲ’ ಎಂದೂ ಕಿಡಿಕಾರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.