
ಭೂ ಒತ್ತುವರಿ ತೆರವು
ಮೈಸೂರು: ತಾಲ್ಲೂಕಿನ ವರುಣ ಹೋಬಳಿಯ ಗುಡುಮಾದನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಸಾಗುವಳಿ ಮಾಡುತ್ತಿದ್ದ ಕೃಷಿ ಭೂ ಒತ್ತುವರಿಯನ್ನು ಭಾನುವಾರ ತಹಶೀಲ್ದಾರ್ ಕೆ.ಎಂ.ಮಹೇಶ್‌ಕುಮಾರ್ ಮತ್ತು ಸಿಬ್ಬಂದಿ ತೆರವುಗೊಳಿಸಿದರು.
ಸರ್ವೆ 68 ಮತ್ತು 60ರ 20 ಎಕರೆ ಭೂಮಿಯನ್ನು ‘ನಿಮ್ಹಾನ್ಸ್’ ಮಾದರಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರು ಮಾಡಲಾಗಿತ್ತು. ಇಲ್ಲಿ ಅನಧಿಕೃತವಾಗಿ ರೈತರು ಸಾಗುವಳಿ ಮಾಡುತ್ತಿದ್ದರು. ಹಿಂದೆ ತೆರವಿಗೆ ಜಿಲ್ಲಾಡಳಿತ ಮುಂದಾಗಿದ್ದಾಗ ವಿರೋಧ ವ್ಯಕ್ತವಾಗಿತ್ತು. ಡಿ.31ರಂದು ಜಮೀನು ಪರಿಶೀಲನೆಗೆ ತೆರಳಿದ್ದ ಗ್ರಾಮ ಆಡಳಿತ ಅಧಿಕಾರಿ, ಗ್ರಾಮ ಸಹಾಯಕನಿಗೆ ಪುಟ್ಟಸ್ವಾಮಿ ಅವರು ಅವಾಚ್ಯವಾಗಿ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.
ಈ ಕಾರಣದಿಂದ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಜೆಸಿಬಿ ಬಳಸಿ ಬಾಳೆತೋಟ ತೆರವು ಮಾಡಲಾಯಿತು. ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಶೇಖರ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.