ADVERTISEMENT

ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನ 6 ಕಡೆ ಜಮೀನು: ಸಚಿವ ಅಶೋಕ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 20:05 IST
Last Updated 21 ಏಪ್ರಿಲ್ 2021, 20:05 IST
ಆರ್‌. ಅಶೋಕ
ಆರ್‌. ಅಶೋಕ    

ಬೆಂಗಳೂರು: ಕೋವಿಡ್‌ನಿಂದ ಮೃತ ಪಟ್ಟವರ ಅಂತ್ಯಸಂಸ್ಕಾರಕ್ಕಾಗಿ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಆರು ಕಡೆಗಳಲ್ಲಿ ಜಮೀನು ಗುರುತಿಸಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

‘ತಾವರೆಕೆರೆಯಲ್ಲಿ 4 ಎಕರೆ ಜಮೀನು ಗುರುತಿಸಲಾಗಿದೆ. ಇನ್ನೂ ಐದು ಕಡೆ ವ್ಯವಸ್ಥೆ ಮಾಡಲಾಗುವುದು. ಅಲ್ಲಿ ತೆರೆದ ಸ್ಥಳದಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.

‘ಕೋವಿಡ್‌ ನಿಯಂತ್ರಣದಲ್ಲಿ ರಾಜ್ಯ ಸರ್ಕಾರದ ಎಲ್ಲರೂ ಜತೆಯಾಗಿದ್ದೇವೆ. ವಿರೋಧ ಪಕ್ಷದವರು ಆರೋಪಿಸುವಂತೆ ನಮ್ಮಲ್ಲಿ ಯಾವುದೇ ಒಡಕು ಇಲ್ಲ’ ಎಂದು ಅಶೋಕ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.